ನಿಲ್ಲಿಸಿದ್ದ ಲಾರಿಗೆ ರಿಕ್ಷಾ ಡಿಕ್ಕಿ ➤ ಮೀನು ವ್ಯಾಪಾರಿಯಾಗಿದ್ದ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 07: ನಿಂತಿದ್ದ ಟಿಪ್ಪರೊಂದಕ್ಕೆ ನಿಯಂತ್ರಣ ತಪ್ಪಿ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ , ರಿಕ್ಷಾ ಚಾಲಕ ಸಾಪನ್ನಪ್ಪಿರುವ ಘಟನೆ ಮಂಗಳೂರಿನ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

 

ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಗಳೂರು ತಾಲೂಕಿನ ವಳಚಿಲ್ ನಿವಾಸಿ ಸಲೀಂ ಮೃತಪಟ್ಟವರು ಎಂದು ತಿಳಿದು ಬಂದಿದೆ. ಆಟೋದಲ್ಲಿ ರಾತ್ರಿ ಮಲ್ಪೆ ದಕ್ಕೆಗೆ ಹೋಗಿ ವಾಪಾಸ್‌ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನು ಈ ಲಾರಿಯೂ ಹಲವಾರು ವರ್ಷಗಳಿಂದ ಇದೇ ಸ್ಥಳದಲ್ಲೇ ನಿಲ್ಲಿಸಲಾಗಿದೆ ಎಂದು ಹೇಳಲಾಗಿದೆ.ಈ ಕುರಿತು ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

 

error: Content is protected !!
Scroll to Top