ದೇಶದಲ್ಲಿ ಎಷ್ಟಿದೆ ಗೊತ್ತ ಕೋವಿಡ್ ಕೇಸ್..!?

 (ನ್ಯೂಸ್ ಕಡಬ) newskadaba.com ನವದೆಹಲಿ, ಅ. 07: ದೇಶದಲ್ಲಿ ಬುಧವಾರ 72,049 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 67 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆಯಾಗಿದ್ದು, ಒಂದೇ ದಿನ 986 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 1,04,555ಕ್ಕೆ ತಲುಪಿದೆ. ಇನ್ನು 67,57,132 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಈ ವರೆಗೂ 57,44,694 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನು 9,07,883 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

Scroll to Top