ಬೆಂಗಳೂರು : ಜಿಲ್ಲಾ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಕೊರೋನಾ ಸೋಂಕು ನಿಯಂತ್ರಣ ಕುರಿತಾಗಿ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಕೋವಿಡ್ ಆಸ್ಪತ್ರೆಗಳಲ್ಲಿರುವ ವೆಂಟಿಲೇಟರ್, ಬೆಡ್, ಕೊರೋನಾ ಚಿಕಿತ್ಸಾ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.ಅನ್ ಲಾಕ್ ಪ್ರಕ್ರಿಯೆ ಮುಂದುವರೆದಿದ್ದು ಇನ್ನಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಿದ್ದಾರೆ.ಅಲ್ಲದೇ ಅಕ್ಟೋಬರ್ 15 ರಿಂದ ಶಾಲಾ ಕಾಲೇಜು ಆರಂಭಿಸುವ ಬಗ್ಗೆಯೂ ಜಿಲ್ಲಾಡಳಿತ ಸಭೆ ನಡೆಸಿ, ಅಭಿಪ್ರಾಯ ಪಡೆಯಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಸೂಚನೆ ಕೊಡಲಿದ್ದಾರೆ.

Also Read  ಭಾರತೀಯ ವಿದ್ಯಾರ್ಥಿಯ ಥಳಿಸಿ ಹತ್ಯೆ...!

 

error: Content is protected !!
Scroll to Top