ಬಿಜೆಪಿ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸೆ.23. ಕಡಬ ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರ ವ್ಯಾಪ್ತಿಯ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ನಡೆಯಿತು.

ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಎ.ವಿ.ತೀರ್ಥರಾಮ ಉದ್ಘಾಟಿಸಿದರು. ಜಿ.ಪಂ.ಮಾಜಿ ಸದಸ್ಯ ವೆಂಕಟ್ ದಂಬೆಕೋಡಿ, ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯ ರೈ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಕಿಶೋರ್ ಶಿರಾಡಿ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು. ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರದ ಅಧ್ಯಕ್ಷ ಧರ್ಮಪಾಲ ರಾವ್ ಸ್ವಾಗತಿಸಿದರು. ದಿನೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಜಿಲ್ಲಾ ಸಮಿತಿ ಸದಸ್ಯ ಎ.ವಿ.ತೀರ್ಥರಾಮ, ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಮಾಜಿ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ, ಗೋಪಾಲಕೃಷ್ಣ ಹೇರಳೆಯವರು ಒಟ್ಟು ಮೂರು ಅವಧಿಗಳಲ್ಲಿ ಅಭ್ಯಾಸ ವರ್ಗ ನಡೆಸಿಕೊಟ್ಟರು.

Also Read  ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…!


ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಸುಳ್ಯ ಶಾಸಕ ಎಸ್.ಅಂಗಾರರವರು ಸಮಾರೋಪ ಭಾಷಣ ಮಾಡಿದರು. ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರದ ಅಧ್ಯಕ್ಷ ಧರ್ಮಪಾಲ ರಾವ್, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಸುಂದರ ಪೂಜಾರಿ ಉಪಸ್ಥಿತರಿದ್ದರು. ಸುಳ್ಯ ಮಂಡಲ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದೆ. ನೆಲ್ಯಾಡಿ ಗ್ರಾಮ ಸಮಿತಿ ಅಧ್ಯಕ್ಷ ರವಿಚಂದ್ರ ಹೊಸವೊಕ್ಲು ವಂದಿಸಿದರು.

error: Content is protected !!
Scroll to Top