ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಚಂಡೀಗಢ, ಅ. 08: ಸಿಬಿಐ ಮಾಜಿ ನಿರ್ದೇಶಕ, ನಾಗಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಮ್ಲಾದ ಅವರ ನಿವಾಸದಲ್ಲಿ ಬುಧವಾರ ನೇಣು ಬಿಗಿದ ಸ್ಥಿತಿಯಲ್ಲಿ ಅಶ್ವನಿ ಅವರ ಶವ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.

 

ಡೆತ್ ನೋಟ್ ನಲ್ಲಿ ಜೀವನದಲ್ಲಿ ತುಂಬಾನೆ ಬೇಸರಗೊಂಡಿದ್ದೇನೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅಶ್ವನಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಶ್ವನಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ವಾಕಿಂಗ್ ಹೋಗಿದ್ದರು. ಮನೆಯಲ್ಲಿರುವ ದೇವರ ಕೋಣೆಯಲ್ಲಿ ಅಶ್ವನಿ ಶವ ಪತ್ತೆಯಾಗಿದೆ. ಅವರ ಪತ್ನಿ, ಮಗ ಹಾಗೂ ಮಗಳು ಮನೆಯ ಕೆಳ ಮಹಡಿಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್‍ಪಿ ಶಿಮ್ಲಾ ಮೋಹಿತ್, ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Also Read  ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಗುಡ್ಡಗಾಡು ಓಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆ

 

ಮರಣೋತ್ತರ ಪರೀಕ್ಷೆಯ ವರದಿಯ ಬಳಿಕವೇ ನಿಖರ ಕಾರಣ ತಿಳಿಯಬಹುದಾಗಿದೆ ಎಂದರು. ಅಶ್ವನಿ ಅವರು ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.  ಅಶ್ವನಿಯವರು ಆಗಸ್ಟ್ 2006ರಿಂದ ಜುಲೈ 2008ರವರೆಗೆ ಹಿಮಾಚಲಪ್ರದೇಶದಲ್ಲಿ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದರು. 2013ರಿಂದ 2014ರವರೆಗೆ ನಾಗಲ್ಯಾಂಡ್ ರಾಜ್ಯಪಾಲರಾಗಿ ಅಶ್ವನಿ ಕಾರ್ಯನಿರ್ವಹಿಸಿದ್ದರು.

error: Content is protected !!
Scroll to Top