ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ➤ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಕರ್ನಾಟಕ ಸೇರಿ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ. ಏಪ್ರಿಲ್‌ನಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್ ಇದ್ದು, ಅದಕ್ಕಿಂತ ಹೆಚ್ಚಿನ ರಸಗೊಬ್ಬರ ಇದೆ. ರೈತರು ಯಾವುದೇ ಆತಂಕವಿಲ್ಲದೆ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ, ರಸಗೊಬ್ಬರ, ಕೀಟನಾಶಕ ಸೇರಿ ಕೃಷಿ ಸಂಬಂಧಿತ ಎಲ್ಲ ಪರಿಕರಗಳನ್ನು ಅತ್ಯವಶ್ಯಕ ವಸ್ತುಗಳ ಪಟ್ಟಿಗೆ ಸೇರಿಸಿ ಉತ್ಪಾದನೆ ಹಾಗೂ ಸಾಗಣೆ ಮೇಲಿನ ನಿರ್ಬಂಧವನ್ನು ಕೇಂದ್ರ ಸರಕಾರ ಸಂಪೂರ್ಣ ತೆಗೆದುಹಾಕಿದೆ. ರಸಗೊಬ್ಬರ ಕಾರ್ಖಾನೆಗಳು, ಗೋದಾಮುಗಳು, ಬಂದರುಗಳು, ವಿತರಣಾ ಕೇಂದ್ರಗಳ ಮಧ್ಯೆ ರಸಗೊಬ್ಬರ ಸಾಗಣೆಗೆ ಬೇಡಿಕೆಗೆ ಅನುಗುಣವಾಗಿ ಗೂಡ್ಸ್‌ ರೈಲುಗಳನ್ನು ಒದಗಿಸುವಂತೆ ರೈಲ್ವೆ ಇಲಾಖೆಗೆ ಕೇಂದ್ರ ಕಟ್ಟುನಿಟ್ಟಿನ ಆದೇಶ ನೀಡಿದೆ.

 

ಹಾಗೆಯೇ ಜಲ ಹಾಗೂ ಭೂಸಾರಿಗೆಗೆ ರಸಗೊಬ್ಬರ, ಕೀಟನಾಶಕ ಮತ್ತಿತರ ಕೃಷಿ ಸಂಬಂಧಿತ ಸರಕುಗಳನ್ನು ಸಾಗಣೆಗೆ ಮುಕ್ತ ಅನುಮತಿ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ದೇಶದ ಬಹುತೇಕ ರಸಗೊಬ್ಬರ ಕಾರ್ಖಾನೆಗಳು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿವೆ. ಈ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ.

 

 

error: Content is protected !!

Join the Group

Join WhatsApp Group