ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೀನುಗಾರಿಕೆ ದೋಣಿ ಮುಳುಗಡೆ ➤ 7 ಮೀನುಗಾರರು ಪ್ರಾಣಾಪಾಯದಿಂದ ಪಾರು – News Kadaba

ಮೀನುಗಾರಿಕೆ ದೋಣಿ ಮುಳುಗಡೆ ➤ 7 ಮೀನುಗಾರರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಾರವಾರ, ಅ. 08: ಮರಳುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, ಅಚ್ಚರಿ ರೀತಿಯಲ್ಲಿ 7 ಮೀನುಗಾರರನ್ನು ರಕ್ಷಿಸಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಘಟನೆ ನಡೆದಿದೆ.

 

ತಾಲೂಕಿನ ಮಾನೀರ್ ಗ್ರಾಮದ ಸಮೀಪ ಅಘನಾಶಿನಿ ನದಿಯಲ್ಲಿ ಈ ಅವಘಡ ಸಂಭವಿಸಿದ್ದು, ದೋಣಿಯಲ್ಲಿದ್ದ 7 ಮಂದಿ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತರರ ಮೀನುಗಾರರೇ ಅವರನ್ನು ರಕ್ಷಿಸುವ ಮೂಲಕ ಜೀವ ಉಳಿಸಿದ್ದಾರೆ. ಸದ್ಯ ಯಾವುದೇ ದುರ್ಘಟನೆ ನಡೆಯದಂತೆ ಪಾರಾಗಿದ್ದಾರೆ. ಮರಳುಗಾರಿಕೆಗೆ ತೆರಳಿದ್ದ  ವೇಳೆ ದೋಣಿಯ ಮೇಲೆ ಭಾರ ಹೆಚ್ಚಾದ ಪರಿಣಾಮ ನದಿಯಲ್ಲಿ ಮಗುಚಿದೆ. ಈ ವೇಳೆ ದೋಣಿಯಲ್ಲಿದ್ದ 7 ಜನ ನದಿಯಲ್ಲಿ ಬಿದ್ದಿದ್ದಾರೆ.

ಇದನ್ನು ಕಂಡ ಹತ್ತಿರದ ಮತ್ತೊಂದು ದೋಣಿಯ ಮೀನುಗಾರರು ತಕ್ಷಣವೇ ಎಚ್ಚೆತ್ತುಕೊಂಡು ದೋಣಿಯಲ್ಲಿ ಒಟ್ಟು 7 ಜನ ಮೀನುಗಾರರನ್ನು ರಕ್ಷಿಸಿದ್ದಾರೆ. ಇದರಿಂದಾಗಿ ದೋಣಿಯಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Scroll to Top