ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದ ಡಿ.ವಿ.ಸದಾನಂದ ಗೌಡ…!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ.23. ಕರ್ನಾಟಕ ರಾಜ್ಯದಲ್ಲಿ 2018 ರಲ್ಲಿ ನಡೆಯಲಿರುವ ಮುಂದಿನ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆಯನ್ನು ಆರಂಭಿಸಿದ್ದು, ರಾಜ್ಯ ಬಿಜೆಪಿ ಸಾಂಪ್ರದಾಯಿಕ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯ ಮಂತ್ರಿ ಡಿ.ವಿ.ಸದಾನಂದ ಗೌಡ ನೇಮಕಗೊಂಡಿದ್ದಾರೆ.

28 ಮಂದಿ ಸದಸ್ಯರ ಸಾಂಪ್ರದಾಯಿಕ ಪ್ರಚಾರ ಸಮಿತಿಗೆ ಡಿ.ವಿ. ಸದಾನಂದ ಗೌಡ ಅವರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಡಿವಿಎಸ್ ಅವರು ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ.

Scroll to Top