ಕುಕ್ಕೇ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕ್ರಿಯಾಕರ್ತ ನೇಣಿಗೆ ಶರಣು



(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.08. ಕುಕ್ಕೆ ಸುಬ್ರಹ್ಮಣ್ಯ ದೇವಳದ ಸರ್ಪ ಸಂಸ್ಕಾರ ಕ್ರಿಯಾಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ಮಯ್ಯ ಭಟ್ (55) ಗುರುವಾರ ಸಂಜೆ ವೇಳೆ ನೇಣಿಗೆ ಶರಣಾಗಿದ್ದಾರೆ.





ಉಪ್ಪಿನಂಗಡಿ ನಾಳ ನಿವಾಸಿಯಾದ ಕೃಷ್ಣ ಮಯ್ಯ ಭಟ್ ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಸರ್ಪಸಂಸ್ಕಾರ ಕ್ರಿಯಾ ಕರ್ತನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಬಾಡಿಗೆ ರೂಮ್ ವೊಂದನ್ನು ಪಡೆದಿದ್ದ ಅವರು ಗುರುವಾರದಂದು ಬಾಡಿಗೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥ‌ಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top