ನೆಲ್ಯಾಡಿ: ಜೀಪ್ ಮತ್ತು ಲಾರಿ ನಡುವೆ ಢಿಕ್ಕಿ ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.08. ಕಲ್ಲು ಸಾಗಾಟದ ಲಾರಿ ಹಾಗೂ ಜೀಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಪುತ್ತೂರಿನಿಂದ ನೆಲ್ಯಾಡಿ ಕಡೆಗೆ ಕೆಂಪುಕಲ್ಲು ತುಂಬಿಕೊಂಡು ತೆರಳುತ್ತಿದ್ದ ಲಾರಿ ಹಾಗೂ ವಿರುದ್ಧ ದಿಕ್ಕಿನಿಂದ ಸಂಚರಿಸುತ್ತಿದ್ದ ಜೀಪ್‌ ನಡುವೆ ಗೋಳಿತೊಟ್ಟು ಸಮೀಪ ಢಿಕ್ಕಿಯಾಗಿದೆ. ಘಟನೆಯಲ್ಲಿ ಜೀಪಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜೀಪ್ ಹಾಗೂ ಲಾರಿಯ ಒಂದು ಪಾರ್ಶ್ವ ಜಖಂಗೊಂಡಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಬೆಳ್ತಂಗಡಿ: ಅಂಗಡಿ ಮಾಲಕ ನೇಣು ಬಿಗಿದು ಆತ್ಮಹತ್ಯೆ

error: Content is protected !!
Scroll to Top