Breaking: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ

ನವದೆಹಲಿ, ಅ.08. ಕಳೆದ ಕೆಲವು ಸಮಯಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್​(74) ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಕೆಲವೇ ದಿನಗಳ ಹಿಂದೆಯಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್ ದೆಹಲಿಯ ಪೋರ್ಟೀಸ್​ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಎನ್‌ಡಿಎ ಮೈತ್ರಿಕೂಟದ ಲೋಕ ಜನಶಕ್ತಿ ಪಾರ್ಟಿಯ ಸಂಸ್ಥಾಪಕರಾದ ರಾಮ್ ವಿಲಾಸ್​ ಪಾಸ್ವಾನ್​ ಅವರು ನರೇಂದ್ರ ಮೋದಿ ಸಂಪುಟದಲ್ಲಿ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿಹಾರದ ಮೂಲದವರಾದ ರಾಮ್ ವಿಲಾಸ್ ಪಾಸ್ವಾನ್ 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು ಮತ್ತು ಹಾಲಿ ರಾಜ್ಯಸಭಾ ಸದಸ್ಯರಾಗಿದ್ದಾರೆ.

Also Read  ನಿಮ್ಮ ಹಕ್ಕನ್ನೂ ಯಾರಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ ಅಸ್ಸಾಂ ಜನತೆಗೆ ಮೋದಿ ಭರವಸೆ

error: Content is protected !!
Scroll to Top