ಉಪ್ಪಿನಂಗಡಿ: ಅತ್ಯಾಚಾರ ಖಂಡಿಸಿ ಹಾಗೂ ಸಿಎಫ್ಐ ವಿದ್ಯಾರ್ಥಿ ಸಂಘಟನಾ ನಾಯಕರ ಬಿಡುಗಡೆಗೆ ಆಗ್ರಹಿಸಿ ಸಿಎಫ್ಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 09. ಉತ್ತರ ಪ್ರದೇಶದ ಹತ್ರಾಸ್ ಎಂಬಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲ್ಲಲ್ಪಟ್ಟ ಮನೀಷಾಳ ಕುಟುಂಬಿಕರನ್ನು ಭೇಟಿಯಾಗಿ ಸಾಂತ್ವನ ಹೇಳಲು ತೆರಳಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ನಾಯಕರನ್ನು ಅಕ್ರಮವಾಗಿ ಬಂಧಿಸಿ ಅವರ ಮೇಲೆ ಯುಎಪಿಎ ಕರಾಳ ಕಾನೂನನ್ನು ಹೇರಿರುವ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರದ ವಿರುದ್ದ ಬೆಳಿಗ್ಗೆ 11.30ರ ವೇಳೆಗೆ ಉಪ್ಪಿನಂಗಡಿ ಜಂಕ್ಷನ್ ನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಇದರ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಫ್ರತಿಭಟನಾಕಾರರನ್ನು ಉದ್ದೇಶಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯರಾದ ಇಮ್ರಾನ್ ಪಾಂಡವರಕಲ್ಲು ಮಾತನಾಡಿ, ಹತ್ರಾಸ್ ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ ವಿದ್ಯಾರ್ಥಿ ನಾಯಕರನ್ನು ಬಂಧಿಸಿ ಯುಎಪಿಎ ಎಂಬ ಕರಾಳ ಕಾನೂನನ್ನು ಅಕ್ರಮವಾಗಿ ಹೇರಿ ಅನ್ಯಾಯಕ್ಕೊಳಗಾದವರ ಪರ ಮಾತನಾಡುವರ ಬಾಯಿ ಮುಚ್ಚಿಸಲು ಮುಖ್ಯಮಂತ್ರಿ ಅದಿತ್ಯನಾಥ್ ನೇತೃತ್ವದ ಯುಪಿಯ ಬಿಜೆಪಿ ಸರಕಾರ ಯತ್ನಿಸುತ್ತಿರುವುದು ಭಾರತ ಸಂವಿದಾನಕ್ಕೆ ಕಪ್ಪು ಚುಕ್ಕೆಯಾಗಿದೆ. ಅದಷ್ಟು ಬೇಗ ವಿದ್ಯಾರ್ಥಿ ನಾಯಕರನ್ನು ಬಿಡುಗಡೆಗೊಳಿಸದಿದ್ದಲ್ಲಿ ದೇಶದಾದ್ಯಂತ ಚಳುವಳಿಯನ್ನು ಆರಂಭಿಸಲಾಗುವುದು
ಅದಲ್ಲದೆ ಅತ್ಯಾಚಾರ ಮಾಡಿ ಕೊಲೆಮಾಡಿದ ನರಭಕ್ಷಕರಿಗೆ ಶಿಕ್ಷೆ ಅಗಿ ಸಂತ್ರಸ್ತೆಗೆ ನ್ಯಾಯ ಸಿಗುವರೆಗೂ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಈ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ
ಎಂದರು.

Also Read  ಜಿಲ್ಲಾಧಿಕಾರಿಗೆ ಪತ್ರ ಮೂಲಕ ಧನ್ಯವಾದ ತಿಳಿಸಿದಿ ಅಶ್ವಿನಿ ಪುನೀತ್ ರಾಜ್ ಕುಮಾರ್..!


ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ವಲಯ ಸದಸ್ಯರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ವಲಯ ಸಮಿತಿ ಅಧ್ಯಕ್ಷರಾದ ರಿಜ್ವಾನ್ ಗೊಳಿತೊಟ್ಟು ಕಾರ್ಯಕ್ರಮವನ್ನು ನಿರೂಪಿಸಿದರು.

error: Content is protected !!
Scroll to Top