ವಿಟ್ಲ: ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ ದರೋಡೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 09. ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ದರೋಡೆ ಮಾಡಿರುವ ಘಟನೆ ಮೇಗಿನಪೇಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೇಗಿನಪೇಟೆ ನಿವಾಸಿಯಾದ ಲಲಿತಾ ಎಂಬವರು ಒಂಟಿ ಜೀವನ ನಡೆಸುತ್ತಿದ್ದು, ಇವರ ಮನೆಗೆ ನುಗ್ಗಿದ ಕಳ್ಳರು ಮಹಿಳೆಗೆ ಮಾರಣಾಂತಿಕ ಹಲ್ಲೆ ನಡೆಸಿ, ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ಹಾಕಿದ್ದಾರೆ. ಬಳಿಕ ಮನೆಯೊಳಗೆ ಚಿನ್ನಕ್ಕಾಗಿ ಹುಡುಕಾಡಿ ಆಕೆಯ ಕುತ್ತಿಗೆಯಲ್ಲಿದ್ದ ಬೆಳ್ಳಿಯ ಸರ ಕಸಿದು, ಮನೆಯ ಮುಂಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಬೆಳಗ್ಗೆ ಮಳೆ ಸುರಿಯುತ್ತಿದ್ದ ಸಂದರ್ಭ ಘಟನೆ ನಡೆದಿದ್ದು, ಮಹಿಳೆಯ ಮುಖಕ್ಕೆ ಹಾಗೂ ಎದೆಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಜುಲೈ 13 ರಂದು ಮೂರನೇ ರೊಜ್ ಗಾರ್ ಮೇಳ

error: Content is protected !!
Scroll to Top