ಮಂಗಳೂರಿನಲ್ಲಿ ಪ್ರಾರಂಭವಾದ “ಮನೆ ಮನೆಗೆ ಕಾಂಗ್ರೆಸ್” ವಿನೂತನ ಕಾರ್ಯಕ್ರಮ…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.23. ಮುಂಬರುವ ಚುನಾವಣೆಗೆ ಕಾಂಗ್ರೆಸ್‌ ಭರ್ಜರಿಯಾಗಿ ತಯಾರಾಗಿದೆ. ಪ್ರತಿ ಮನೆ ಮನೆಗೂ ಕಾಂಗ್ರೆಸ್ ತಲುಪಬೇಕೆಂಬ ಉದ್ಧೇಶದಿಂದ ಮಂಗಳೂರಿನಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ಶನಿವಾರ ನೀಡಲಾಗಿದೆ.

ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ ಆರ್ ಲೋಬೋ ಅವರ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಎಐಸಿಸಿ ಉಸ್ತುವಾರಿ ವಿಷ್ಣುನಾಥನ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮನೆಮನೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಗರದ ಶಿವಭಾಗ್ ನ ರಸ್ತೆಗಳಲ್ಲಿ ಸಂಚರಿಸಿದ ಕಾಂಗ್ರೆಸ್ ನಾಯಕರು ಅಲ್ಲಿಯ ಮನೆಮನೆಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಸಿದರು.

Scroll to Top