ಅಕ್ಟೋಬರ್ 16ರ ವರೆಗೆ ಶಾಲಾ ದಾಖಲಾತಿ ವಿಸ್ತರಿಸಿ ಆದೇಶ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09: ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ.

 

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ದಾಖಲಾತಿ ಅವಧಿಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದ್ದವು. ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಗಾಗಿ ನೀಡಿದ್ದ ಕಾಲಾವಕಾಶವನ್ನು ಅಕ್ಟೋಬರ್ 16 ರವರೆಗೆ ವಿಸ್ತರಿಸಿದೆ.

Also Read  ಸರ್ಕಾರದಿಂದ ಗಣಿಗಾರಿಕೆ ಪ್ರವಾಸೋದ್ಯಮಕ್ಕೆ ಒತ್ತು

error: Content is protected !!
Scroll to Top