(ನ್ಯೂಸ್ ಕಡಬ) newskadaba.com ಕೇರಳ, ಅ. 10 :ಕೇರಳ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಂಬ್ರಿ ಎಂದು ತಮ್ಮ ಆಪ್ತ ವಲಯದಲ್ಲಿ ಖ್ಯಾತರಾಗಿದ್ದ ಸುರೇಶ್ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಅಲಪ್ಪುಳದಲ್ಲಿರುವ ತಮ್ಮ ನಿವಾಸದಲ್ಲಿ ನೇಣಿ ಬಿಗಿದುಕೊಂಡು ಕೃತ್ಯವೆಸಗಿದ್ದಾರೆ ಎಂದು ವರದಿಯಾಗಿದೆ.
ಕೇರಳದ ಅಲಪ್ಪುಳ ಜಿಲ್ಲೆಯವರಾದ ಸುರೇಶ್ ಕುಮಾರ್ ಎಡಗೈ ಸ್ಪಿನ್ನರ್ ಆಗಿ ಮಿಂಚಿದ್ದರು. 90ರ ದಶಕದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲ ಕೇರಳವನ್ನು ಪ್ರತಿನಿಧಿಸಿದ ಮೊದಲ ಆಟಗಾರ ಎಂಬ ಖ್ಯಾತಿಯನ್ನು ಪಡೆದುಕೊಂಡಿದ್ದರು ಸುರೇಶ್ ಕುಮಾರ್. ಆ ಅಂಡರ್ 19 ತಂಡದ ನಾಯಕರಾಗಿದ್ದವರು ದಿಗ್ಗಜ ಕ್ರಿಕೆಟಿಗ ರಾಹುಲ್ ದ್ರಾವಿಡ್. ಕೀವಿಸ್ ಪಡೆಯನ್ನು ಸ್ಟೀಫನ್ ಫ್ಲೆಮಿಂಗ್ ಮುನ್ನಡೆಸಿದ್ದರು.ನಿವೃತ್ತಿಯ ಬಳಿಕ ಸುರೇಶ್ ಕುಮಾರ್ ಭಾರತೀಯ ರೈಲ್ವೇನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸುರೇಶ್ ಕುಮಾರ್ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಅಲಪ್ಪುಳದಲ್ಲಿರುವ ನಿವಾಸಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.