‘ವಿದ್ಯಾಗಮ ಕಾರ್ಯಕ್ರಮ’ ತಾತ್ಕಾಲಿಕವಾಗಿ ಸ್ಥಗಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ರಾಜ್ಯದಲ್ಲಿ ವಿದ್ಯಾಗಮ ಯೋಜನೆ ಶುರುವಾದ ನಂತ್ರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗಲಲು ಕಾರಣವಾಗಿತ್ತು. ಇಂತಹ ಯೋಜನೆ ಸ್ಥಗಿತಕ್ಕೆ ಮಂಗಳವಾರದಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಕೂಡ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.

ಇದರ ಮಧ್ಯೆ ರಾಜ್ಯ ಸರ್ಕಾರ ಕೊರೋನಾ ಸಂಕಷ್ಟದ ನಡುವೆಯೂ ಜಾರಿಗೆ ತರಗಾಲಿದ್ದಂತ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ.ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಮತ್ತು ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೆ ವಿದ್ಯಾಗಮ ಕಾರ್ಯಕ್ರಮವನ್ನು ಪುನರಾರಂಭಿಸುವುದಿಲ್ಲ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪ್ರಕಟಿಸಿದ್ದಾರೆ.

Also Read  ಬೆಳ್ಳಾರೆಯಲ್ಲಿ ಕೊರೋನಾ ಸ್ಫೋಟ..‼️ ➤ ಸುಳ್ಳು ಸುದ್ದಿ ರವಾನಿಸಿದ ಕಿಡಿಗೇಡಿಗಳು

 

 

error: Content is protected !!
Scroll to Top