ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ.

 

 

ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ. ಜೈಲಿನಲ್ಲಿ ಇದುವರೆಗೆ ಒಂದೇ ಕೊಠಡಿಯಲ್ಲಿದ್ದ ರಾಗಿಣಿ, ಸಂಜನಾ ಪರಸ್ಪರ ಕಿತ್ತಾಡಿಕೊಂಡ ಕಾರಣ ಇಬ್ಬರನ್ನೂ ಪ್ರತ್ಯೇಕ ಸೆಲ್ ನಲ್ಲಿರಿಸಲಾಗಿದೆ ಎನ್ನಲಾಗಿದೆ. ಕಳೆದ ಒಂದೂವರೆ ತಿಂಗಳಿಂದ ಜೈಲಿನಲ್ಲಿರುವ ನಟಿಯರಾದ ಸಂಜನಾ ಮತ್ತು ರಾಗಿಣಿಗೆ ಶುಕ್ರವಾರ ಕೂಡ ಜಾಮೀನು ಸಿಗಲಿಲ್ಲ. ಬದಲಿಗೆ ಇಬ್ಬರು ನಟಿಯರ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ ಆಗಿದೆ. ಅಕ್ಟೋಬರ್ 23ರವರೆಗೆ ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಿಸಿ ಎನ್‍ಡಿಪಿಎಸ್ ವಿಶೇಷ ಕೋರ್ಟ್ ಆದೇಶ ನೀಡಿದೆ.

Also Read  15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳ ನೋಂದಣಿ ರದ್ದು! ➤ ಕೇಂದ್ರ ಸರ್ಕಾರ

 

error: Content is protected !!
Scroll to Top