ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ➤ ಮಿಥುನ್ ರೈ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು , ಅ. 11:  ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.

 

ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ಯೋಗಿ ಆದಿತ್ಯನಾಥ ಒಬ್ಬ ಗಂಡಸಾ, ಆವ ಒರ್ವ ಆಯೋಗ್ಯ, ಅವ ಒಬ್ಬ ಹಿಂದೂ ಎಂದು ಹೇಳಲು ನಾಚಿಕೆಯಾಗುತ್ತದೆ. ಆತ ಕರ್ನಾಟಕ ಹಾಗೂ ದಕ್ಷಿಣಕನ್ನಡಕ್ಕೆ ಬಂದರೆ ಆತನ ಮುಖಕ್ಕೆ ಮಸಿ ಬಳಿಯುವುದಾಗಿ ಹೇಳಿಕೆ ನೀಡಿದ್ದರು. ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.

Also Read  ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ

 

 

error: Content is protected !!
Scroll to Top