ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಹಾಡಹಗಲೇ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದ ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

 

 

ರಾಜೇಶ್ ಎಂಬ ವ್ಯಕ್ತಿಯನ್ನು ಜಾನ್ ಪೌಲ್ ಹಾಗೂ ದಿನೇಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಆರೋಪಿ ಜಾನ್ ಪೌಲ್ ಎಂಬಾತನ ತಂಗಿಯನ್ನು ರಾಜೇಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಹೋದರಿಯ ಸಾವಿಗೆ ಬಾವನೇ ಕಾರಣವೆಂದು ಹೇಳಲಾಗುತ್ತಿದ್ದು, ಬಾಮೈದನೇ ಬಾವನನ್ನು ಕೊಲೆ ಮಾಡಿದ್ದಾನೆ. ಈತ ಮೂವತ್ತಕ್ಕೂ ಹೆಚ್ಚು ಬಾರಿ ಚಾಕು ಇರಿದು ಕೊಲೆ ಮಾಡಿದ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣಕ್ಕೆ ಸಂಬಂದಿಸಿದಂತೆ ಕಾಡುಗೋಡಿ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Also Read  ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ

 

error: Content is protected !!
Scroll to Top