(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಇನ್ನಷ್ಟುಹೆಚ್ಚಾಗಿದ್ದರಿಂದ ರಾಜ್ಯದಲ್ಲಿ ಅ.14ರ ವರೆಗೆ ಭಾರಿ ಹಾಗೂ ಅತ್ಯಂತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಈ ಕಾರಣಕ್ಕೆ ಕರಾವಳಿ ಭಾಗಕ್ಕೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.ಅ.12ರಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾದ್ಯತೆ ಇದ್ದು.‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಗಾಳಿ, ಗುಡುಗು ಸಹಿತ ಅತ್ಯಂತ ಭಾರಿ ಮಳೆ ಬೀಳಲಿರುವ ಹಿನ್ನೆಲೆಯಲ್ಲಿ ಅ.13ರಂದು ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಕೊಡಲಾಗಿದೆ.ಕರಾವಳಿಯಲ್ಲಿ ಅ.12ರಿಂದ 14ರವರೆಗೆ ಅತಿ ಹೆಚ್ಚು ಮಳೆ ಬೀಳಲಿದ್ದು.ರೆಡ್ ಅಲರ್ಟ್ ಘೋಷಣೆಯಾಗಿದೆ.