(ನ್ಯೂಸ್ ಕಡಬ) newskadaba.com ಉಡುಪಿ, ಅ.12: 2016 ಜುಲೈ 28ರಂದು ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಠಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗಾ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನೋಟಿಸ್ ನೀಡಿದೆ. ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ನಂತರ ಶವವನ್ನು ಹೋಮಕುಂಡದಲ್ಲಿ ಸುಟ್ಟು ಹಾಕಲಾಗಿತ್ತು.ಇದೀಗಾ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿಯ ಸಂಬಂಧ, ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ಜ್ಯೋತಿಷಿ ನಿರಂಜನ್ ಭಟ್ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿಯೊಂದಿಗೆ ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದು, ಅಲ್ಲದೇ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. ಕೆಲವು ಸಾಕ್ಷಿದಾರರನ್ನು ಆರೋಪಿಗಳ ಎದುರಲ್ಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಬೇಕು ಎಂದು ಹೈಕೋರ್ಟ್ ಹೇಳಿದ್ದು, ಭಾಸ್ಕರ್ ಶೆಟ್ಟಿ ಪತ್ನಿಗೆ ಜಾಮೀನು ನೀಡಲಾಗಿದೆ. ಭಾಸ್ಕರ್ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಈ ಪ್ರಕರಣದ ಪ್ರಮುಖ ಆರೋಪಿಗಳು. ಸಾಕ್ಷಿ ನಾಶಪಡಿಸಿದ ಕಾರಣ ಬಂಧಿಸಲ್ಪಟ್ಟ ನಿರಂಜನ್ ಭಟ್ ಅವರ ತಂದೆ ಶ್ರೀನಿವಾಸ್ ಭಟ್ ಹಾಗೂ ಚಾಲಕ ರಾಘವೇಂದ್ರ ಜಾಮೀನಿನ ಮೇಲೆ ಹೊರಬಂದಿದ್ದಾರೆ.