ಶ್ರೀನಗರದಲ್ಲಿ ಎನ್ಕೌಂಟರ್ ➤ ಎಲ್‌ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ

(ನ್ಯೂಸ್ ಕಡಬ) newskadaba.com ಶ್ರೀನಗರ, ಅ.12: ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ನಡೆದಿದೆ.

 

 

ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಸಿಆರ್’ಪಿಎಫ್ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಇದೀಗ ಎಲ್‌ಇಟಿ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆ ಇದೀಗ ಎಲ್‌ಇಟಿ ಟಾಪ್ ಕಮಾಂಡರ್ ಸೈಫುಲ್ಲಾ ಹಾಗೂ ಆತನ ಸಹಚರನನ್ನು ಹತ್ಯೆ ಮಾಡಿದ ಎಂದು ತಿಳಿದುಬಂದಿದೆ.

Also Read  ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ....!!

 

error: Content is protected !!