ಕೋವಿಡ್ ನಿಂದ ನೀಟ್ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ‌ ಗುಡ್ ನ್ಯೂಸ್.?!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.12: ಕೊರೋನಾ ಸೋಂಕಿನಿಂದ ಸೆಪ್ಟೆಂಬರ್ ನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗದೇ ಪರೀಕ್ಷೆಗೆ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಇದೀಗ ಗುಡ್ ನ್ಯೂಸ್ ಕೊಟ್ಟಿದೆ. ಕೋವಿಡ್ 19 ಸೋಂಕಿನಿಂದ ಅಥವಾ ಕಂಟೈನ್ಮೆಂಟ್ ಝೋನ್ ಗಳಲ್ಲಿ ವಾಸಮಾಡುವ ಕಾರಣದಿಂದ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 14 ರಂದು ನೀಟ್ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.

 

 

ಈ ಕುರಿತಂತೆ ವಿದ್ಯಾರ್ಥಿಗಳು ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಕೊರೋನಾದಿಂದ ಸಿಇಟಿ ಪರೀಕ್ಷೆಗೆ ತಪ್ಪಿಸಿಕೊಂಡಿದ್ದಂತ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ನಡೆಸಿ, ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ ಸೂಚಿಸಿದೆ. ಅಲ್ಲದೇ ಅಕ್ಟೋಬರ್ 14ರಂದು ನೀಟ್ ಪರೀಕ್ಷೆ ನಡೆಸಿ, ಅಕ್ಟೋಬರ್ 16ರಂದು ಫಲಿತಾಂಶ ಕೂಡ ಪ್ರಕಟಿಸುವಂತೆ ಸೂಚಿಸಿದೆ. ಹೀಗಾಗಿ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಅಕ್ಟೋಬರ್ 14ರಂದು ನೀಟ್ ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ.

 

error: Content is protected !!

Join the Group

Join WhatsApp Group