ಆತ್ಮ ನಿರ್ಭರ ಭಾರತ ➤ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಪಂಜದಲ್ಲಿ ಚಾಲನೆ

(ನ್ಯೂಸ್ ಕಡಬ) newskadaba.com ಪಂಜ, ಅ. 12: ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಇಂದು ಪಂಜದಲ್ಲಿ ಚಾಲನೆ ನೀಡಿದರು.

 

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ. ಕ ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಪಂಜ ಹಾಗೂ ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷೆಯನ್ನು ಶಾಸಕರಾದ ಎಸ್ .ಅಂಗಾರರವರು ವಹಿಸಿದ್ದರು.

 

 

ಕಾರ್ಯಕ್ರಮದ ವೇದಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘಚಾಲಕ ಚಂದ್ರಶೇಖರ ತಳೂರು, ಪಂಜ ದೇವಸ್ಥಾನದ ಆಡಳಿತಾಧಿಕಾರಿಗಳಾದ ದೇವಿಪ್ರಸಾದ್ ಕಾನತ್ತೂರು,ವಿವೇಕಾನಂದ ಪಾಲಿಟೆಕ್ನಿಕ್ ನ ಗೋಪಿನಾಥ್ ಶೆಟ್ಟಿ, ಪಂಜದ ಹಿರಿಯ ವೈಧ್ಯಾರಾದ ಡಾ. ರಾಮಯ್ಯ ಭಟ್ ಸೇರಿದಂತೆ ಆನೇಕ ಗಣ್ಯರು ಉಪಸ್ಥಿತರಿದ್ದರು. ಇನ್ನು ಈ ಶಿಬಿರ ಆರು ದಿನಗಳ ಕಾಲ ನಡೆಯಲಿದ್ದು, ಶಿಬಿರದಲ್ಲಿ ಕೃಷಿ ಯಂತ್ರೋಪಕರಣಗಳ ದುರಸ್ತಿ, ವಿದ್ಯುತ್ ಉಪಕರಣಗಳ ದುರಸ್ತಿ, ಫ್ಯಾಷನ್ ಡಿಸೈನಿಂಗ್, ಪುಡ್ ಟೆಕ್ನಾಲಾಜಿ, ಕೃಷಿ ಕಸಿ ಕಟ್ಟುವುದು, ಹೀಗೆ ಹಲವಾರು ತರಬೇತಿ ನಡೆಯಲಿದೆ.

 

 

error: Content is protected !!

Join the Group

Join WhatsApp Group