ಹೆಸರಾಂತ ಕಲಾವಿದ ಮೋಹನ ಸೋನ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು , ಅ. 13:ಹೆಸರಾಂತ ಕಲಾವಿದ ಸುಳ್ಯ ನಿವಾಸಿ ಮೋಹನ ಸೋನ (64) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು. ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ, ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ ತೋರಿದ್ದರು. ಅನೇಕ ಕಡೆ ಚಿತ್ರಕಲಾ ಪ್ರದರ್ಶನಗಳನ್ನು ಮಾಡಿದ್ದರು. ಸೋಣಂಗೇರಿಯಲ್ಲಿ ಬಯಲು ಚಿತ್ರಾಲಯ ಮಾಡಿ ಇಡೀ ರಾಜ್ಯದ ಗಮನ ಸೆಳೆದಿದ್ದರು.

Also Read  ಪಡುಪೆರಾರೆ ಗ್ರಾಮ ಪಂಚಾಯತ್ ➤ 2019-20 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ

 

 

error: Content is protected !!
Scroll to Top