(ನ್ಯೂಸ್ ಕಡಬ) newskadaba.com ಮಂಗಳೂರು ಅ. 13: ಸಂಕಷ್ಟ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು ಮನೆಯಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಜೊತೆಗೆ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ ಹಾಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ.