ಬಿ.ಸಿ.ರೋಡ್: ನಿಲ್ಲಿಸಿದ್ದ ಬಸ್‌ಗಳಿಗೆ ಢಿಕ್ಕಿ ಹೊಡೆದ ಟಿಪ್ಪರ್ ► ನಾಲ್ಕು ಬಸ್ಸುಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.24. ಪೆಟ್ರೋಲ್ ಪಂಪ್ ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಬಸ್ಸುಗಳಿಗೆ ಮರಳು ತುಂಬಿದ್ದ ಡಿಪ್ಪರೊಂದು ಢಿಕ್ಕಿ ಹೊಡೆದ ಘಟನೆ ಇಂದು ಬೆಳಿಗ್ಗೆ ಬಿ.ಸಿ.ರೋಡಿನಲ್ಲಿ ನಡೆದಿದೆ.

ರಾತ್ರಿ ಹೊತ್ತು ಪೆಟ್ರೋಲ್ ಬಂಕ್ ಪಕ್ಕದಲ್ಲಿ ಬಸ್‌ಗಳನ್ನು ನಿಲ್ಲಿಸಲಾಗಿದ್ದು, ಭಾನುವಾರ ಬೆಳಿಗ್ಗೆ ವೇಗವಾಗಿ ಬಂದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಬಸ್ಸುಗಳಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಟಿಪ್ಪರ್ ಚಾಲಕನಿಗೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಟಿಪ್ಪರ್ ನಲ್ಲಿ ಮರಳು ತುಂಬಲಾಗಿದ್ದು, ಅಪಘಾತದಿಂದಾಗಿ ರಸ್ತೆಯಲ್ಲೆಲ್ಲಾ ಮರಳು ಚೆಲ್ಲಿತ್ತು. ಘಟನೆಯಿಂದಾಗಿ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಬಳಿಕ ಬಂಟ್ವಾಳ ಟ್ರಾಫಿಕ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Scroll to Top