14 ತಿಂಗಳ ಬಳಿಕ ಮೆಹಬೂಬಾ ಮುಫ್ತಿ ಬಿಡುಗಡೆ.!

(ನ್ಯೂಸ್ ಕಡಬ) newskadaba.com  ಶ್ರೀನಗರ,. 14:ಜಮ್ಮು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ, ಮಾಜಿ ಸಿಎಂ ಮೆಹಬೂಬಾ ಮುಫ್ತಿಯರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿದೆ.ಕಣಿವೆ ರಾಜ್ಯದಲ್ಲಿ ಗೃಹ ಬಂಧನಕ್ಕೀಡಾದ ಮೊದಲ ರಾಜಕೀಯ ನಾಯಕಿ ಇವರಾಗಿದ್ದರು.

ಆಗಸ್ಟ್ 5ರಂದು 370ನೇ ವಿಧಿ ರದ್ದುಪಡಿಸಿದ ಬಳಿಕ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಮೆಹಬೂಬಾ ಮುಫ್ತಿ ಕಿಡಿ ಕಾರಿದ್ದಾರೆ. ಪಿಡಿಪಿ ಮುಖ್ಯಸ್ಥೆ ಮುಫ್ತಿಯವರು ಬಿಡುಗಡೆಯಾಗಿರುವ ಕುರಿತು ಜಮ್ಮು ಕಾಶ್ಮೀರ ಸರ್ಕಾರದ ವಕ್ತಾರ ರೋಹಿತ್ ಕನ್ಸಾಲ್ ತಿಳಿಸಿದ್ದಾರೆ. 370ನೇ ವಿಧಿ ರದ್ದು ಪಡಿಸಿದ ಬಳಿಕ ಮೆಹಮೂಬೂಬಾ ಮುಫ್ತಿಯವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಅವರ ಮನೆಯಲ್ಲಿಯೇ ಅವರನ್ನು ಬಂಧಿಸಲಾಗಿತ್ತು.

Also Read  ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ

error: Content is protected !!
Scroll to Top