ವಾಯು ಸೇನೆಯ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ ➤ ಒಟ್ಟು 15 ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ಕಾಬೂಲ್ . 14: ಅಫ್ಘಾನಿಸ್ಥಾನದ ವಾಯು ಸೇನೆಯ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 15 ಜನರು ಮೃತಪಟ್ಟಿದ್ದಾರೆ.

ಮಂಗಳವಾರ ರಾತ್ರಿ ದಕ್ಷಿಣ ಹೆಲ್‍ಮಂದ್ ವ್ಯಾಪ್ತಿಯ ನವಾ ಜಿಲ್ಲೆಯಲ್ಲಿ ಅಫ್ಘಾನ್ ವಾಯುಸೇನೆ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿದೆ. ಒಂದು ಹೆಲಿಕಾಪ್ಟರ್ ನಲ್ಲಿ ಕಮಾಂಡೋಗಳನ್ನು ಒಂದು ಸ್ಥಳಕ್ಕೆ ಕರೆದೊಯ್ಯಲಾಗುತ್ತಿತ್ತು. ಮತ್ತೊಂದರಲ್ಲಿ ಗಾಯಾಳುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಅಪಘಾತ ನಡೆದಿದ್ದು, ಸ್ಥಳದಲ್ಲಿಯೇ ಎಂಟು ಜನ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ.

Also Read  ಐದು ತಿಂಗಳ ಮಗುವಿನ ಕೈ ಕಾಲು ಮುರಿದ ತಂದೆ       ➤  ಆರೋಪಿ ಪತ್ರಕರ್ತ ಅಂದರ್​

 

error: Content is protected !!
Scroll to Top