ನಿಷೇಧಿತ ನೋಟುಗಳ ಚಲಾವಣೆ ದಂಧೆ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.15: ನಿಷೇಧಿತ ನೋಟುಗಳ ಚಲಾವಣೆ ದಂಧೆಯಲ್ಲಿ ತೊಡಗಿದ್ದ ಆರೋಪದಡಿ ಇಬ್ಬರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅರೋಪಿಗಳನ್ನು ಶಿವಕುಮಾರ್ (44), ವಿಜಯ ಕುಮಾರ್ (40)  ಗುರುತಿಸಲಾಗಿದೆ.

 

 

ಜಾಲಹಳ್ಳಿ ಕ್ರಾಸ್ ಬಳಿ ಕಾರಿನಲ್ಲಿ ಬಂದು, ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಹಳೆಯ ನೋಟುಗಳನ್ನು ವಿದೇಶಕ್ಕೆ ಸಾಗಿಸಲು ಆರೋಪಿಗಳು ಯತ್ನಿಸುತ್ತಿದ್ದರು. ವಿದೇಶದಲ್ಲಿ ಭಾರತದ ಕರೆನ್ಸಿ ಚಲಾವಣೆಯ ಜಾಲ ಇರುವುದು ವಿಚಾರಣೆ ವೇಳೆ ಪತ್ತೆಯಾಗಿದೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Also Read  ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!     

 

error: Content is protected !!