ಕುಚಿಪುಡಿಯ ಖ್ಯಾತ ನೃತ್ಯಗಾರ್ತಿ ಶೋಭಾ ನಾಯ್ಡು ವಿಧಿವಶ

(ನ್ಯೂಸ್ ಕಡಬ) newskadaba.com ಹೈದರಾಬಾದ್ . 15: ಕುಚಿಪುಡಿಯ ಖ್ಯಾತ ನೃತ್ಯಗಾರ್ತಿ ಶೋಭಾ ನಾಯ್ಡು ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಶೋಭಾ ನಾಯ್ಡು ಅಗಲಿಕೆಗೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಶೋಭಾ ಅವರಿಗೆ 1991 ರಲ್ಲಿ ಅವರಿಗೆ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2001 ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವ ಮದ್ರಾಸ್‌ನ ಶ್ರೀ ಕೃಷ್ಣ ಗಣ ಸಭೆಯಿಂದ ನೃತ್ಯ ಚೂಡಾಮಣಿ ಪ್ರಶಸ್ತಿ ಸಂದಿದೆ. ಹೈದರಾಬಾದ್‌ನ 40 ವರ್ಷಪರಂಪರೆ ಇರುವ ಕೂಚುಪುಡಿ ಆರ್ಟ್ ಅಕಾಡೆಮಿಗೆ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಭಾರತ ಮತ್ತು ವಿದೇಶಗಳ 1,500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

Also Read   ಬ್ರೆಜಿಲ್ ನಲ್ಲಿ ವಿಮಾನ ಪತನ..!          62 ಮಂದಿ ಸಜೀವ ದಹನ ಭೀಕರ ದೃಶ್ಯ..!                                  

error: Content is protected !!
Scroll to Top