ಸ್ಯಾಂಡಲ್‍ವುಡ್ ಡ್ರಗ್ ಕೇಸ್ ಪ್ರಕರಣ ➤ ಬಾಲಿವುಡ್ ನಟ ವಿವೇಕ್ ಒಬೆರಾಯ್‍ಗೆ ಸಿಸಿಬಿ ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು . 15: ಸ್ಯಾಂಡಲ್‍ವುಡ್ ಡ್ರಗ್ ಕೇಸ್ ವಿಚಾರವಾಗಿ ಇಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

 

ಡ್ರಗ್ ಮಾಫಿಯಾ ಕೇಸಿನಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಆತನನನ್ನು ವಿಚಾರಣೆಗೆ ಒಳಪಡಿಸಲು ಸಿಸಿಬಿ ಪೊಲೀಸರು ಹುಡುಕುತ್ತಿದ್ದಾರೆ. ಆರೋಪಿ ಆದಿತ್ಯ ಆಳ್ವಾ, ನಟ ವಿವೇಕ್ ಒಬೆರಾಯ್ ಅವರ ಸಂಬಂಧಿಯಾಗಿದ್ದು ಅವರ ಮನೆಯಲ್ಲಿ ಇರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಇಂದು ಒಬೆರಾಯ್ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ರೇಡ್ ಮಾಡಿದ್ದಾರೆ.ನಾಪತ್ತೆಯಾಗಿರುವ ಆರೋಪಿ ಆದಿತ್ಯ ಆಳ್ವಾನಿಗೆ ವಿವೇಕ್ ಒಬೆರಾಯ್ ತನ್ನ ಮನೆಯಲ್ಲಿ ಆಶ್ರಯ ನೀಡಿರುವ ಶಂಕೆ ವ್ಯಕ್ತವಾಗಿತ್ತು ಈ ಹಿನ್ನಲೆಯಲ್ಲಿ ಇಂದು ಪೊಲೀಸರು ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ಮಾಡಿದ್ದಾರೆ.

Also Read  ಲಾ ಸ್ಕೂಲ್‌ನಲ್ಲಿ ಶೇ.25ರಷ್ಟು ಮೀಸಲಾತಿ ಕಡ್ಡಾಯ ➤  ಸಚಿವ ಡಾ ಸಿ.ಎನ್‌.ಅಶ್ವತ್ಥ ನಾರಾಯಣ

 

error: Content is protected !!
Scroll to Top