PUBG ಗೆಳೆಯರಿಂದ ಬಾಲಕಿಯ ಅತ್ಯಾಚಾರ.!!

(ನ್ಯೂಸ್ ಕಡಬ) newskadaba.com ಭೋಪಾಲ್, . 16:  ಆನ್‌ಲೈನ್‌ನಲ್ಲಿ ಪಬ್‌ಜಿ ಆಡುವಾಗ ಪರಿಚಿತರಾದ ಮೂವರು ವ್ಯಕ್ತಿಗಳು 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

 

 

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮಧ್ಯಪ್ರದೇಶದ ಭೋಪಾಲದ ರಂಭಾನಗರ ಪ್ರದೇಶದ ನಿವಾಸಿಗಳಾಗಿದ್ದು 18-19 ವರ್ಷದವರಾಗಿದ್ದಾರೆ. ಆನ್‌ಲೈನ್‌ನಲ್ಲಿ ಪಬ್‌ಜಿ ಆಡುವಾಗ ಬಾಲಕಿಯ ಪರಿಚಯವಾಗಿತ್ತು. ಸೆಪ್ಟಂಬರ್‌ನಲ್ಲಿ ಬಾಲಕಿಯನ್ನು ಪುಸಲಾಯಿಸಿ ರಂಭಾನಗರಕ್ಕೆ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಘಟನೆಯ ವೀಡಿಯೊ ಚಿತ್ರೀಕರಿಸಿಕೊಂಡಿದ್ದರು. ಅತ್ಯಾಚಾರದ ಬಗ್ಗೆ ಬಾಯಿಬಿಟ್ಟರೆ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ.

Also Read  ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ

error: Content is protected !!
Scroll to Top