(ನ್ಯೂಸ್ ಕಡಬ) newskadaba.com ಮಂಗಳೂರು ಅ. 16: ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಜನರು ಮಾತನಾಡುವ ತುಳುಭಾಷೆಯನ್ನು ಉತ್ತೇಜಿಸುವ ಸಲುವಾಗಿ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅವರು ವಿಶಿಷ್ಟ ರೀತಿಯಲ್ಲಿ ಹೆಜ್ಜೆಯಿಟ್ಟಿದ್ದಾರೆ.
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆ ತುಳುನಾಡು ಭಾಗದಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತಿದ್ದು, ಇಲ್ಲಿನ ಜನರು ಆಡು ಭಾಷೆ ಮತ್ತು ವ್ಯಾವಹಾರಿಕ ಭಾಷೆಯಾಗಿ ಬಳಸುತ್ತಾರೆ. ಆದರೆ ಲಿಪಿಯ ಬಳಕೆ ತೀರಾ ಕಡಿಮೆಯಿದ್ದು, ಕೇವಲ ಬೆರಳೆಣಿಕೆಯ ಜನರು ಮಾತ್ರ
ತುಳು ಲಿಪಿ ಬಲ್ಲವರಾಗಿದ್ದಾರೆ.
ತುಳು ಭಾಷೆ,ನಾಡು ನುಡಿಗಾಗಿ ಕೆಲಸ ಮಾಡುವ ಸಂಘಟನೆಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಈ ಹಿಂದಿನಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದರು.ಇದೀಗ ಇದರ ಮುಂದುವರಿದ ಭಾಗವಾಗಿ ತನ್ನ ಕಚೇರಿಯಲ್ಲಿ ತುಳು ಲಿಪಿಯ ನಾಮಫಲಕವನ್ನೇ ಅಳವಡಿಸುವ ಮೂಲಕ ಇತರರು ಹಾಕುವಂತೆ ಪ್ರೇರೇಪಿಸಿದ್ದಾರೆ. ಜೊತೆಗೆ ಪ್ರೊಮೋಟ್ ತುಳು ಎಂದು ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ.ಮಂಗಳೂರು ಮಹಾನಗರ ಪಾಲಿಕೆಯ ಶಾಸಕರ ಕಚೇರಿಯಲ್ಲಿ ತುಳು ಲಿಪಿಯ ನಾಮಫಲಕವನ್ನು ಅಳವಡಿಸಿದ್ದು, ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.