ಸುಧಾಮೂರ್ತಿ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್‌

(ನ್ಯೂಸ್ ಕಡಬ) newskadaba.com ಮೈಸೂರು  ಅ. 16:  ಮೈಸೂರು ವಿಶ್ವವಿದ್ಯಾಲಯ ತನ್ನ 100ನೇ ಘಟಿಕೋತ್ಸವದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ.

ಈ ಕುರಿತು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್, ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಸುಧಾಮೂರ್ತಿ ಅವರು ಕೈಗೊಂಡಿರುವ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಹಾಗೂ ಅವರ ವೈಯುಕ್ತಿಕ ಸಾಧನೆ ಪರಿಗಣಿಸಿ ಅವರಿಗೆ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದರು.ಅಕ್ಟೋಬರ್‌ 19ರಂದು ವಿವಿಯ 100ನೇ ಘಟಿಕೋತ್ಸವ ನಡೆಯಲಿದ್ದು, ಇದರಲ್ಲಿ ವರ್ಚುವಲ್‌ ವೇದಿಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದರೆ, ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ಥ ನಾರಾಯಣ್‌ ಅವರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಅವರು ವಿವರಿಸಿದರು.

Also Read  ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ವಿಧಿವಶ

 

 

error: Content is protected !!
Scroll to Top