ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಣ್ಮೂರು ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಎಣ್ಮೂರು, ಅ.17: ಎನ್.ಪಿ.ಇ.ಪಿ. ರಾಷ್ಟ್ರೀಯ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಣ್ಮೂರು ಪ್ರೌಢ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

 

ಈ ಕಾರ್ಯಕ್ರಮವು ಮಾನವ ಸಂಪನ್ಮೂಲ ಇಲಾಖೆ, ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆಯಿತು. ಸಂಸ್ಥೆಯ ವಿದ್ಯಾರ್ಥಿಗಳಾದ ನಂದನ್‌ ವೈ.ಬಿ, ಪವನ್‌ ಕುಮಾರ್‌ ಎನ್‌, ಅಶ್ವಿತ್ ಎ, ಸಿಂಚನಾ ಎ, ಕೀರ್ತಿ ಕೆ. ಬಿ, ಸುದೀಪ್‌ ಕೆ, ಹಾಗೂ ನಿಖಿಲ್.ಎನ್‌ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ.

Also Read  ಮಂಗಳೂರು ವಿವಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

 

 

error: Content is protected !!
Scroll to Top