(ನ್ಯೂಸ್ ಕಡಬ) newskadaba.com ಮೈಸೂರು ಅ. 17 : ಇಂದು ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ಕೊರೋನಾ ಹಿನ್ನೆಲೆ, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈ ನಡುವೆ ದಸರಾ ವೀಕ್ಷಿಸಲು ಸಾಕಷ್ಟು ಪ್ರವಾಸಿಗರು ಬರುವುದರಿಂದ ಸಾಮಾಜಿಕ ಅಂತರ ಕಾಪಾಡುವುದು ಕಷ್ಟ ಹಾಗೂ ಮೈಸೂರಿನಲ್ಲಿ ಕೊರೋನಾ ಹೆಚ್ಚಾಗಿ ಹರಡುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಅ. 17ರಿಂದ ಮೈಸೂರಿನ ಎಲ್ಲ ಪ್ರವಾಸಿ ತಾಣಗಳನ್ನೂ ಬಂದ್ ಮಾಡಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದರು.
ಆದರೆ ಇಂದು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾಧಿಕಾರಿಗಳು ಹಾಕಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದಾರೆ. ದಸರಾ ಉದ್ಘಾಟನಾ ವೇದಿಕೆಯಲ್ಲೇ ಈ ಘೋಷಣೆಯನ್ನು ಉಸ್ತುವಾರಿ ಸಚಿವರು ಮಾಡಿದ್ದಾರೆ. ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಈ ನಿರ್ಬಂಧ ವಿಧಿಸಲಾಗಿತ್ತು. ಇಂದಿನಿಂದ ನವೆಂಬರ್ 1ರವರೆಗೆ ನಿರ್ಬಂಧ ವಿಧಿಸಲಾಗುತ್ತು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಿರ್ಬಂಧ ವಿಧಿಸಿ ಆದೇಶ ಮಾಡಿದ್ದರು. ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ನಂಜನಗೂಡು ದೇವಾಲಯಕ್ಕೆ ನಿರ್ಬಂಧ ಹಾಕಲಾಗಿತ್ತು. ಕೆ.ಆರ್.ಎಸ್ ಹಾಗೂ ರಂಗನತಿಟ್ಟಿನ ನಿರ್ಬಂಧವನ್ನು ಸಹ ತೆರವು ಮಾಡಲಾಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪನವರ ಸೂಚನೆ ಮೇರೆಗೆ ಈ ನಿರ್ಬಂಧ ತೆರವು ಮಾಡಲಾಗಿದೆ. ಆ ಮೂಲಕ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಿರ್ಧಾರಕ್ಕೆ ಹಿನ್ನಡೆಯಾಗಿದೆ.