ಇಂದು ದಿ. ನಟ ಚಿರುಸರ್ಜಾ ಅವರ 36ನೇ ವರ್ಷದ ಹುಟ್ಟುಹಬ್ಬ ➤ ಗಣ್ಯರು, ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು . 17: ದಿವಂಗತ ನಟ ಚಿರಂಜೀವಿ ಸರ್ಜಾ ಅವರ 36ನೇ ವರ್ಷದ ಹುಟ್ಟುಹಬ್ಬಕ್ಕೆ ಸ್ಯಾಂಡಲ್‍ವುಡ್, ನಟ, ನಟಿಯರು ಹಾಗೂ ಗಣ್ಯರು ಶುಭ ಕೋರುತ್ತಿದ್ದು, ಅವರ ಮಾವ ಅರ್ಜುನ್ ಸರ್ಜಾ ಸಹ ಭಾವನಾತ್ಮಕ ಸಾಲುಗಳಿಂದ ಅಳಿಯನಿಗೆ ಶುಭಾಶಯ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅರ್ಜುನ್ ಸರ್ಜಾ, ಸುದೀಪ್, ದರ್ಶನ್ ಸೇರಿದಂತೆ ಹಲವು ಗಣ್ಯರು ಚಿರು ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಅರ್ಜುನ್ ಸರ್ಜಾ ಅವರು ಚಿರು ಹುಟ್ಟಿದ ಸಂದರ್ಭ, ಅವರು ತೀರಿದ ಬಳಿಕ ಅನುಭವಿಸುತ್ತಿರುವ ಸಂಕಟದ ಬಗ್ಗೆ ಬರೆದುಕೊಂಡಿದ್ದಾರೆ.ಇಂದು ಬೆಳಗ್ಗೆ ಧ್ರುವ ಹಾಗೂ ಮೇಘನಾ ಸಹ ಫೋಟೋ ಹಾಕಿ ಚಿರು ಹಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.

Also Read  ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಘೋಷಿಸಲ್ಪಟ್ಟ ಮಗು ಸ್ಮಶಾನದಲ್ಲಿ ಜೀವಂತ

 

ಚಿಕ್ಕ ವಯಸ್ಸಿನಲ್ಲಿ ಅಣ್ಣನೊಂದಿಗೆ ಇದ್ದ ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿಕೊಂಡು ಧ್ರುವ ಸರ್ಜಾ ಅಣ್ಣನ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಚಿರು ಪತ್ನಿ ಮೆಘನಾ ರಾಜ್ ಸಹ ಫೋಟೋ ಹಂಚಿಕೊಂಡು ಸಾಲುಗಳನ್ನು ಬರೆದಿದ್ದು, ಹ್ಯಾಪಿ ಬರ್ತ್ ಡೇ ಮೈ ವಲ್ರ್ಡ್ ಐ ಲವ್ ಯು ಫಾರ್ ಎವರ್ ಆ್ಯಂಡ್ ಆಲ್‍ವೇಸ್ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಭಾವನಾತ್ಮಕವಾಗಿ ಶುಭಾಶಯ ಕೋರಿದ್ದಾರೆ.

 

error: Content is protected !!
Scroll to Top