ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆ ➤ ಉನ್ನತ ತನಿಖೆಗೆ ರಮಾನಾಥ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು . 17: ಮುಡಿಪು ಸಮೀಪ ನಡೆಯುತ್ತಿರುವ ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆಯ ತನಿಖೆಯನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆಗ್ರಹಿಸಿದರು

ಮುಡಿಪು, ಬಾಳೆಪುಣಿ, ಇನೋಳಿ ಸೇರಿದಂತೆ ಕೇರಳದ ಗಡಿ ಭಾಗದ ರೆಡ್ ಬಾಕ್ಸೈಟ್ ಗಣಿಗಾರಿಕೆಯಲ್ಲಿ ಸ್ಥಳೀಯರೊಂದಿಗೆ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಧಂದೆಕೋರರು ಇದ್ದಾರೆ. ಇವರು ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತಿರುವುದು ಕಂಡು ಬರುತ್ತಿದೆ. ಆದ್ದರಿಂದ ಉನ್ನತ ಮಟ್ಟದ ತನಿಖೆ ಅನಿವಾರ್ಯ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಅವರು ತಿಳಿಸಿದರು.

 

Also Read  ನಮಗೆ 'ಟ್ರಂಪ್' ಬೇಕು ➤ ಅಮೆರಿಕಾದಲ್ಲಿ ರಸ್ತೆಗಿಳಿದ ಲಕ್ಷಾಂತರ ಮಂದಿ

ರಾಜ್ಯಮಟ್ಟದಲ್ಲಿ ವರದಿ ಮಾಡಿ ಗಮನ ಸೆಳೆದಿದ್ದರೂ, ಸರಕಾರ ತುಟಿ ಬಿಚ್ಚುತ್ತಿಲ್ಲ. ಜಿಲ್ಲಾಧಿಕಾರಿ ತನಿಖೆಗೆ ಏಳು ಜನರ ಸಮಿತಿ ರಚಿಸಿದ್ದಾರೆ. ಜೊತೆಗೆ ಉನ್ನತ ಮಟ್ಟದ ತನಿಖೆಯೂ ನಡೆದರೆ, ತಪ್ಪುತಸ್ಥರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ರಮಾನಾಥ ರೈ ಹೇಳಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಶಶಿಧರ ಹೆಗ್ಡೆ, ಅಬ್ದುಲ್ ರವೂಫ್, ನವೀನ್ ಡಿಸೋಜ, ಮಿಥುನ್ ರೈ, ನೀರಜ್‍ಪಾಲ್, ನಝೀರ್ ಬಜಾಲ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

error: Content is protected !!
Scroll to Top