ವಿದ್ಯಾರ್ಥಿಗಳಿಗೆ ಮಂಜೂರಾಗದ ವಿದ್ಯಾರ್ಥಿ ವೇತನ ; ದೆಹಲಿ ಐ.ಐ.ಟಿ ಅಧಿಕಾರಿಗಳಿಗೆ ಕ್ಯಾಂಪಸ್ ಫ್ರಂಟ್ ಮನವಿ ➤ ಸಮಸ್ಯೆ ಶೀಘ್ರವಾಗಿ ಪರಿಹರಿಸಿಕೊಡುವ ಬಗ್ಗೆ ಅಧಿಕಾರಿಗಳಿಂದ ಭರವಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. 2019-20 ರ ಸಾಲಿನ ಪೋಸ್ಟ್ ಮೆಟ್ರಿಕ್, ಪ್ರೀ ಮೆಟ್ರಿಕ್ , ಮೆರಿಟ್ – ಕಮ್ – ಮೀನ್ಸ್ ವಿದ್ಯಾರ್ಥಿ ವೇತನ ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದ ಬಗ್ಗೆ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ನಿಯೋಗವು ದೆಹಲಿಯಿಂದ ಮಂಗಳೂರಿಗೆ ಆಗಮಿಸಿದ ಐ.ಐ.ಟಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ,ಮನವಿ ಸಲ್ಲಿಸಿತು.


ಕಳೆದ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನವು ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಈ ಸಲದ ಶಾಲಾ, ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗದೆ ತಮ್ಮ ಶೈಕ್ಷಣಿಕ ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಕ್ಕೀಡಾಗಿದ್ದಾರೆ. ಆದ್ದರಿಂದ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಶೀಘ್ರ ಮಂಜೂರುಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿಯನ್ನು ಸ್ವೀಕರಿಸಿದ ಅಧಿಕಾರಿಗಳು ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಜೊತೆ ಕಾರ್ಯದರ್ಶಿ ಮೊಹಮ್ಮದ್ ಉವೈಸ್, ನೌಫಲ್ ಉಳ್ಳಾಲ ಏರಿಯ ಸಮಿತಿ ಸದಸ್ಯ, ನಿಹಾಬ್, ಶುಹೈಬ್ ಬಜ್ಪೆ ಉಪಸ್ಥಿತರಿದ್ದರು.

error: Content is protected !!
Scroll to Top