ಮನೀಶ್ ಶೆಟ್ಟಿ ಕೊಲೆ ಪ್ರಕರಣ ➤ ಇಬ್ಬರು ಆರೋಪಿಗಳ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಬೆಂಗಳೂರು . 18: ಬ್ರಿಗೇಡ್ ರಸ್ತೆಯ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಅವರಿಗೆ ಗುಂಡಿಕ್ಕಿ ಕೊಲೆ ಗೈದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32 )ಎಂದು ಗುರುತಿಸಲಾಗಿದೆ.

 

ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಉಪಯೋಗಿಸಿದ್ದ ಮಾರಕಾಸ್ತ್ರಗಳನ್ನ ಜಫ್ತಿ ಮಾಡಲು ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡುವಾಗ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಆಗ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ. ಆಗ ಎ1 ಆರೋಪಿ ಶಶಿಕಿರಣ್ ಹಾಗೂ ಎ4 ಆರೋಪಿ ಅಕ್ಷಯ್ ಕಾಲಿಗೆ ಗುಂಡು ತಗುಲಿದೆ. ಎಂದು ಡಿಸಿಪಿ ಅನುಚೇತ್ ತಿಳಿಸಿದ್ದಾರೆ.

Also Read  'ವಿಟ್ಲದಲ್ಲಿ ನಡೆದ ಅತ್ಯಾಚಾರವನ್ನು ಮಂಗಳೂರು ಫೈಲ್ಸ್ ಎಂದು ಕರೆಯಬಹುದೇ' ? - ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

 

 

error: Content is protected !!
Scroll to Top