ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ಕೇಸ್ ➤ ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ

(ನ್ಯೂಸ್ ಕಡಬ) newskadaba.com ಮುಂಬೈ . 18: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಪುತ್ರ ಮಹಾಅಕ್ಷಯ್ ವಿರುದ್ಧ ಮುಂಬೈನ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಮೋಸ ಮತ್ತು ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಮಿಥುನ್ ಪತ್ನಿ ಯೋಗಿತಾ ಬಾಲಿ ಅವರನ್ನ ಸಹ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಗಿದೆ.

 

ಫಿಲಂ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿಕೊಂಡಿರುವ ಮಾಡೆಲ್ ಕಂ ನಟಿ ಈ ದೂರು ದಾಖಲಿಸಿದ್ದಾರೆ. 2015ರಿಂದ ಮಹಾಅಕ್ಷಯ್ ಜೊತೆ ರಿಲೇಶನ್ ಶಿಪ್ ನಲ್ಲಿದ್ದು, ಮದುವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. 2015ರಲ್ಲಿ ಮಹಾಅಕ್ಷಯ್ ತನ್ನನ್ನು ಮನೆಗೆ ಕರೆಸಿಕೊಂಡು ತಂಪು ಪಾನೀಯದಲ್ಲಿ ನಶೆ ಪದಾರ್ಥ ಮಿಕ್ಸ್ ಮಾಡಿದ್ದನು. ನಾನು ಜ್ಞಾನ ತಪ್ಪಿದಾಗ ಅತ್ಯಾಚಾರ ಎಸಗಿದ್ದನು. ಆದಾದ ಬಳಿಕ ಮದುವೆ ಆಗೋದಾಗಿ ಮಾತು ಸಹ ನೀಡಿದ್ದನು.

Also Read  ಟೀಂ ಇಂಡಿಯಾದ ಮುಂದಿನ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ

ಕಳೆದ ನಾಲ್ಕು ವರ್ಷಗಳಿಂದ ಆತ ನನ್ನ ಜೊತೆ ಸಂಪರ್ಕದಲ್ಲಿದ್ದು, ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ. ಈ ಅವಧಿಯಲ್ಲಿ ಗರ್ಭಿಣಿಯಾದ ವಿಷಯ ತಿಳಿಯುತ್ತಲೇ ಗರ್ಭಪಾತಕ್ಕೆ ಒತ್ತಾಯಿಸಿದನು. ಗರ್ಭಪಾತಕ್ಕೆ ಒಪ್ಪದಿದ್ದಾಗ ಮೋಸದಿಂದ ಮಾತ್ರೆ ನೀಡಿ ಅಬಾರ್ಷನ್ ಮಾಡಿಸಿದನು.ದೂರು ಸಲ್ಲಿಸಿದ ಬಳಿಕ ಮಹಾಅಕ್ಷಯ್ ತಾಯಿ ಬೆದರಿಕೆ ಹಾಕಿದ್ದು, ಮಗನಿಂದ ದೂರ ಹೋಗುವಂತೆ ಒತ್ತಡ ಹಾಕಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ದಾಖಲಿಸಿದ್ದಾರೆ.

 

error: Content is protected !!
Scroll to Top