ಬೆಂಗಳೂರು ವಿಮಾನ ನಿಲ್ದಾಣದ ಗೋದಾಮಿನಿಂದ 2.5 ಕೆಜಿ ಚಿನ್ನ ನಾಪತ್ತೆ ➤ ಐವರು ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಕೇಸ್.!

(ನ್ಯೂಸ್ ಕಡಬ) newskadaba.com ಬೆಂಗಳೂರು . 18: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ವಿಭಾಗದ ಗೋದಾಮಿನಿಂದ 2.5 ಕೆಜಿ ಚಿನ್ನವನ್ನು ಕದಿಯಲಾಗಿದೆ. ಚಿನ್ನ ಕಳ್ಳಸಾಗಣೆಯ ವೇಳೆ ಸೀಜ್ ಮಾಡಲಾಗಿದ್ದ ಚಿನ್ನವನ್ನು ಬೆಂಗಳೂರು ಏರ್​ಪೋರ್ಟ್ ಗೋದಾಮಿನಲ್ಲಿ ಇರಿಸಲಾಗಿತ್ತು. ಆ ಚಿನ್ನವನ್ನು ಕಳವು ಮಾಡಿರುವ ಆರೋಪದಲ್ಲಿ 5 ಜನ ಕಸ್ಟಮ್ಸ್​ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

 

ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಸಿಬಿಐ ಎಸಿಬಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕಸ್ಟಮ್ಸ್ ಜಂಟಿ ಆಯುಕ್ತ ಎಂ.ಜೆ. ಚೇತನ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

Also Read  ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ 'ಅಮೃತಮತಿ' ಆಯ್ಕೆ

 

 

ಜೂನ್ 2012ರಿಂದ ಡಿಸೆಂಬರ್ 2014ರವರೆಗೆ ಬೆಂಗಳೂರಿನ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಜಪ್ತಿ ಮಾಡಲಾಗಿದ್ದ ಚಿನ್ನವನ್ನು ವಿಮಾನ ನಿಲ್ದಾಣದ ಎಂಹೆಚ್​ಬಿ ಗೋಡಾನ್​ನಲ್ಲಿ ಶೇಖರಣೆ ಮಾಡಲಾಗಿತ್ತು. ಚಿನ್ನ ಕಳವು ಬಗ್ಗೆ ಆಂತರಿಕ ತನಿಖೆ ಕೈಗೊಂಡಿದ್ದ ಕಸ್ಟಮ್ಸ್​ ಇಲಾಖೆಯ ವಿಜಿಲೇನ್ಸ್ ಅಧಿಕಾರಿಗಳು ತನಿಖೆ ವೇಳೆ 13 ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ 2 ಕೆಜಿ 594 ಗ್ರಾಂ. ಚಿನ್ನ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

error: Content is protected !!
Scroll to Top