ಸುಬ್ರಹ್ಮಣ್ಯ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ► ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಸೆ.26. ಇತ್ತೀಚೆಗೆ ಐಟಿ ದಾಳಿಗೆ ಒಳಗಾಗಿದ್ದ ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಭಾನುವಾರ ಆಗಮಿಸಿ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ ನೆರವೇರಿಸಿದರು.

ತಮ್ಮ ಮನೆಯ ಮೇಲೆ ಇತ್ತೀಚೆಗೆ ಐಟಿ ದಾಳಿ ನಡೆದ ಬಳಿಕ ಸ್ವಲ್ಪಮಟ್ಟಿಗೆ ಕುಗ್ಗಿ ಹೋಗಿದ್ದ ಡಿಕೆಶಿ ಅವರು ಇದೀಗ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ಮನ ಶಾಂತಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಡಿಕೆಶಿ ಶ್ರೀ ದೇವಳದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅವರೊಂದಿಗೆ ಅವರ ಮಕ್ಕಳಾದ ಐಶ್ವರ್ಯ, ಆಭರಣ ಹಾಗೂ ಆಕಾಶ್ ಕೂಡಾ ತುಲಾಭಾರ ಸೇವೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಉಪಸ್ಥಿತರಿದ್ದರು.

error: Content is protected !!
Scroll to Top