ಶಬರಿಮಲೆ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸಿದ ಭಕ್ತನಿಗೆ ಕೊರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ತಿರುವನಂತಪುರಂ , ಅ.19: ಕೋವಿಡ್ ಮಾರ್ಗಸೂಚಿ ಪ್ರಕಾರ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಕೋವಿಡ್ 19 ಮಾರ್ಗಸೂಚಿಯ ಪ್ರಕಾರ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವವರು 48 ಗಂಟೆಗಳ ಹಿಂದೆ ಕೊರೊನಾ ಪರೀಕ್ಷೆ ಮಾಡಿಸಿರಬೇಕು. ಹಾಗೂ ವರದಿ ನೆಗೆಟಿವ್ ಇರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ನಿಯಮ ಜಾರಿಗೆ ತಂದಿತ್ತು. ಆದರೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.

 

 

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಭಕ್ತನಿಗೆ ಶಬರಿಮಲೆ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ. ಅ.17 ರಿಂದ ಅಯ್ಯಪ್ಪಸ್ವಾಮಿ ದೇಗುಲ ತೆರೆಯಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದಾರೆ. ಅಕ್ಟೋಬರ್ 21ರವರೆಗೆ ಭಕ್ತರಿಗೆ ಬರಲು ಅವಕಾಶ ನೀಡಲಾಗಿದೆ. ನಿತ್ಯ 250 ಭಕ್ತರಿಗೆ ಮಾತ್ರ ಅವಕಾಶವಿದ್ದು, 10 ರಿಂದ 60 ವರ್ಷದೊಳಗಿನವರಿಗೆ ಮಾತ್ರ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶವಿದೆ.

Also Read  ಖಾಸಗಿ‌ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ವೀಕೃತವಲ್ಲ ➤ ಕ್ಯಾಂಪಸ್ ಫ್ರಂಟ್

 

error: Content is protected !!
Scroll to Top