ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಸ್ಥಳೀಯ ಈಜುಗಾರರು

(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.19: ಪಾಣೆಮಂಗಳೂರಿನ ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸ್ಥಳೀಯ ಯುವಕರ ತಂಡವೊಂದು ರಕ್ಷಿಸಿದ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಹಾಸನ ಜಿಲ್ಲೆಯ ಕುಮಾರ್ ಎಂದು ಗುರುತಿಸಲಾಗಿದೆ.

 

ಈತ ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕುಮಾರ್, ಇಂದು ಖಾಕಿ ಸಮವಸ್ತ್ರ ಧರಿಸಿಕೊಂಡೇ  ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಈಜುಗಾರ ಮಹಮ್ಮದ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಮಾಹಿತಿ ನೀಡಿದ್ದಕ್ಕೆ ಸ್ಪಂಧಿಸಿದ್ದ ಮಹಮ್ಮದ್ ರವರು ದೋಣಿಯ ಮೂಲಕ ತೆರಳಿ ಯುವಕನ್ನು ನೀರಿನಿಂದ ಮೇಲೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸದ್ಯ ಯುವಕನಿಗೆ ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Also Read  ಆ.12 : ಚೆನ್ನಾವರದಲ್ಲಿ ಆಟಿದ ಕೂಟ-ಜನಪದ ಗೊಬ್ಬುಲು

 

error: Content is protected !!
Scroll to Top