ಬೆಂಗಳೂರಿನಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ ➤ ಹಲವೆಡೆ ಮನೆಯೊಳಗೆ ನುಗ್ಗಿದ ನೀರು

(ನ್ಯೂಸ್ ಕಡಬ) newskadaba.com ಬೆಂಗಳೂರು . 19: ಮಳೆಯಿಂದಾಗಿ ಜನ ಮತ್ತು ವಾಹನಗಳ ಓಡಾಟ ಕಡಿಮೆಯಾಗಿದೆ. ಬೆಳಗಿನ ಜಾವ ಸುರಿದ ಧಾರಾಕಾರ ಮಳೆಯಿಂದಾಗಿ ಅಪಾರ್ಟ್​ಮೆಂಟ್ ಮತ್ತು ಮನೆಗಳಿಗೆ ನೀರು ನುಗ್ಗಿದೆ.

ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಇಂದು ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಮಳೆ ಆರಂಭವಾಗಿದ್ದು, ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದಾಗಿ ಆಫೀಸು, ಅಂಗಡಿಗಳಿಗೆ ಹೊರಟ ಬೈಕ್ ಸವಾರರು ಪರದಾಡುತ್ತಿದ್ದಾರೆ. ಬೆಳಗ್ಗೆಯಿಂದ ಮೂರನೇ ಬಾರಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆ, ಸಿಗ್ನಲ್​ಗಳಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ.

Also Read  ಕೊೈಲ ಗ್ರಾಮಸಭೆ

 

ಮೈಸೂರು ರಸ್ತೆ, ಚಾಮರಾಜಪೇಟೆ, ಹೊಸಕೆರೆಹಳ್ಳಿ, ವಿಜಯನಗರ, ನಾಯಂಡಹಳ್ಳಿ, ಶ್ರೀನಗರ, ಚಂದ್ರಾ ಲೇಔಟ್, ಎಲೆಕ್ಟ್ರಾನಿಕ್ ಸಿಟಿ, ಬಿಟಿಎಂ ಲೇಔಟ್, ಜಯನಗರ, ಕೆಆರ್​ ಮಾರ್ಕೆಟ್ ಸೇರಿ ಹಲವೆಡೆ ಜೋರು ಮಳೆಯಾಗಿದೆ.

 

error: Content is protected !!
Scroll to Top