ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.26. ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಎರ್ಮಾಳು ಗ್ರಾಮದ ಸಮೀಪ ಸೋಮವಾರ ನಡೆದಿದೆ.

ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ ಅದಮಾರು ಗ್ರಾಮದ ರವಿ ದೇವಾಡಿಗ ಎಂಬ ವ್ಯಕ್ತಿಯ ಶವ ಎಂದು ಗುರುತಿಸಲಾಗಿದೆ. ರವಿ ದೇವಾಡಿಗ ಸೋಮವಾರ ಮಧ್ಯಾಹ್ನ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ರಾತ್ರಿಯಾದರು ಮನೆಗೆ ವಾಪಸ್ ಬಂದಿರಲಿಲ್ಲ.

ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಉಡುಪಿಯ ಆರ್‍ಪಿಎಫ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸಿದ್ದಾರೆ. ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ರೈಲ್ವೆ ಟ್ರ್ಯಾಕ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರಾ ಎಂಬ ಬಗ್ಗೆ ತನಿಖೆ ಆಗಬೇಕಿದೆ. ಮೇಲ್ನೋಟಕ್ಕೆ ಗಮನಿಸಿದಾಗ ಇದೊಂದು ರೈಲು ಅಪಘಾತ ಎಂದು ಸ್ಥಳೀಯರು ಅಭಿಪ್ರಾಯಿಸಿದ್ದರು.

Also Read  ಉಪ್ಪಿನಂಗಡಿ: ಆಟೋ ಚಾಲಕನಿಗೆ ಹಲ್ಲೆ ನಡೆಸಿ ತಂಡ ಪರಾರಿ    ➤ ಆಸ್ಪತ್ರೆಗೆ ದಾಖಲು

 

error: Content is protected !!
Scroll to Top