ನವೆಂಬರ್’ನಲ್ಲಿ ಕಾಲೇಜು ಪುನರಾರಂಭಕ್ಕೆ ಸರ್ಕಾರ ಸಿದ್ಧತೆ

(ನ್ಯೂಸ್ ಕಡಬ) newskadaba.com ಬೆಂಗಳೂರು . 19: ನವೆಂಬರ್ ತಿಂಗಳಿನಲ್ಲಿ ಕಾಲೇಜು ಪುನರಾರಂಭಕ್ಕೆ ಯುಜಿಸಿ ಗ್ರೀನ್ ಸಿಗ್ನಲ್ ನೀಡಿದ್ದು ಸರ್ಕಾರದಿಂದಲೂ ಕಾಲೇಜು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಂತಹಂತವಾಗಿ ಕಾಲೇಜು ಪುನರಾರಂಭಿಸಲು ಸರ್ಕಾರ ಅನುಮತಿ ನೀಡಿದ್ದು ಇದರ ಬೆನ್ನಲ್ಲೇ ಯುಜಿಸಿ ನವೆಂಬರ್ ನಲ್ಲಿ ಕಾಲೇಜು ಆರಂಭಕ್ಕೆ ಸೂಚಿಸಿದೆ.

ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಹಂತ ಹಂತವಾಗಿ ಶಾಲಾ-ಕಾಲೇಜುಗಳನ್ನು ಅಕ್ಟೋಬರ್ 15ರ ನಂತರ ಆರಂಭಿಸುವಂತೆ ಸೂಚಿಸಲಾಗಿತ್ತು. ಈ ಬಳಿಕ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ಕೂಡ ಹಂತ ಹಂತವಾಗಿ ಶಾಲಾ-ಕಾಲೇಜು ಆರಂಭಕ್ಕೆ ಸಲಹೆ ನೀಡಿತ್ತು. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ನವೆಂಬರ್ ನಲ್ಲಿ ಡಿಗ್ರಿ ಕಾಲೇಜು ಆರಂಭಕ್ಕೆ ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

Also Read  ಪಂಜ: ಮಕ್ಕಳ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಕೊರೋನಾ ತಡೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾಲೇಜು, ಶಾಲೆ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ತಜ್ಞರು, ಆರೋಗ್ಯ ಕ್ಷೇತ್ರದ ತಜ್ಞರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿ ಬಳಿಕ ಕಾಲೇಜು, ಶಾಲೆಗಳನ್ನು ಆರಂಭಿಸುವ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

error: Content is protected !!
Scroll to Top